ನಾವು ಸಿದ್ಧ ನೀವೂ ಸಿದ್ಧರಾಗಿ ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧರಾಗಿ: ಸಚಿವ ಆರ್.ಅಶೋಕ್

ಪ್ರಾಕೃತಿಕ ವಿಕೋಪ ಎದುರಿಸಲು ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಲು ಸಿದ್ಧವಿದೆ, ಆದರೆ ಎಲ್ಲಾ ಮುಂಜಾಗೃತ ಕ್ರಮ ವಹಿಸಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಮಾತನಾಡಿದ ಅವರು ಈಗಾಗಲೇ ಜಿಲ್ಲಾಧಿಕಾರಿಯವರ ಖಾತೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಂಬಂಧ 50 ಕೋಟಿಯಷ್ಟು ಹಣವಿದ್ದು ಈ ಸಂಬಂಧ ಎಲ್ಲಾ ಇಲಾಖೆಗಳು ಕೈಜೋಡಿಸಬೇಕಿದೆ.ಅಗತ್ಯ ವಿರುವ ಕಡೆಗಳಲ್ಲಿ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸುವ ವ್ಯವಸ್ಥೆ ತ್ವರಿತಗತಿಯಲ್ಲಿ ಆಗಬೇಕಿದೆ ಎಂದರು.