ನಿಯಂತ್ರಣ ತಪ್ಪಿ ಕಾರು ಅಪಘಾತ

ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಉರುಳಿ ಘಟನೆ ವಿರಾಜಪೇಟೆ ಮಡಿಕೇರಿ ರಸ್ತೆಯಲ್ಲಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಕದನೂರು ಸೇತುವೆಯಲ್ಲಿ ಈ ದುರ್ಘಟನೆ ಸಂಭವಿದ್ದು, ವೇಗದಲಿದ್ದ ಕಾರಿಗೆ ಏಕಾಏಕಿ ಎದುರಾದ ಸೇತುವೆಯಲ್ಲಿ ನಿಯಂತ್ರಣ ಕಳೆದುಕೊಂಡಿದ್ದು ಕಳಕ್ಕೆ ಬಿದ್ದಿದೆ.

ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಲಿಲ್ಲ, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಕಾರನ್ನು ಮೇಲೆತ್ತಲು ಕಾರ್ಯ ನಡೆದಿದೆ.