fbpx

ನಿಯಮ ಸಡಿಲಿಸಿದ ಕೇರಳ ಸರ್ಕಾರ; ಪಂಪಾ ನದಿ ಸ್ನಾನಕ್ಕೆ ಅವಕಾಶ

ಕೊರೋನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಶಬರಿಮಲೆ ಯಾತ್ರೆಗೆ ವಿಧಿಸಲಾಗಿದ್ದ ನಿರ್ಬಂಧನೆಗಳನ್ನು ಸಡಿಲಗೊಳಿಸಲು ಕೇರಳ ಸರ್ಕಾರ ತೀರ್ಮಾನಿಸಿದೆ.

ಈ ಬಗ್ಗೆ ಸಿಎಂ ಪಿಣರಾಯಿ ವಿಜಯನ್ ಹಾಗೂ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ನಡೆಸಿದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ವೇಳೆ ಪಂಪಾದಿಂದ ನೀಲಿಮಲೆ, ಅಪಾಚೆ ಮೇಡು ಹಾಗೂ ಮರಕೂಟಂ ಮೂಲಕ ಭಕ್ತರು ಶಬರಿಮಲೆ ತಲುಪಲು ಅನುಮತಿ ನೀಡಲು ನಿರ್ಧರಿಸಿದೆ.
ಮಾರ್ಗ ಮಧ್ಯದಲ್ಲಿ ಭಕ್ತರಿಗ ತಂದಲು ವ್ಯವಸ್ಥೆ, ಪ್ರಾರ್ಥಮಿಕ ಆರೋಗ್ಯ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಶಬರಿಮಲೆ ಯಾತ್ರೆಯ ವೇಳೆ ಪಂಪಾ ನದಿಯಲ್ಲಿ ಸ್ನಾನ ಹಾಗೂ ಬಲಿ ತರ್ಪಣ ನೀಡಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.

error: Content is protected !!