ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟದ ಬಗ್ಗೆ ಪರಿಶೀಲನೆ ಹಾಗು ಜಾಗೃತಿ

ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂತೆ ದಿವಸವಾದ ಇಂದು ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಬ್ಬಂದಿ ವರ್ಗ ದವರಿಂದ ಸಂತೆ ಮಾರುಕಟ್ಟೆಗೆ ಹಾಗೂ ಬೇಕರಿಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು,
ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಹಾಗೂ ಪ್ಲಾಸ್ಟಿಕ್ ಕವರ್ ಗಳನ್ನು ವಶಪಡಿಸಿಕೊಳ್ಳಲಾಯಿತು. ಅಂದಾಜು 1ಕೆಜಿ ಪ್ಲಾಸ್ಟಿಕ್ ವಶ ಪಡಿಸಿಕೊಂಡು 400 ರೂಪಾಯಿಗಳ ದಂಡ ವಸೂಲಿ ಮಾಡಲಾಯಿತು. ಹಾಗಯೇ ನಿಷೇಧಿತ ಪ್ಲಾಸ್ಟಿಕ್ ಬಗ್ಗೆ ತಿಳುವಳಿಕೆ ನೀಡಲಾಯಿತು.