ನೂತನ ಉಸ್ತುವಾರಿ ಸಚಿವರನ್ನು ಸ್ವಾಗತಿಸಿದ ಜಿಲ್ಲಾ ಕ.ಸ.ಪ ಅಧ್ಯಕ್ಷರು

ಕೊಡಗು ಜಿಲ್ಲಾ ನೂತನ ಉಸ್ತುವಾರಿ ಮಂತ್ರಿ ಬಿ.ಸಿ.ನಾಗೇಶ್ ರವರು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ರವರು ಪುಸ್ತಕ ನೀಡುವ ಮೂಲಕ ಸ್ವಾಗತಿಸಿ ಅಭಿನಂದಿಸಿದರು ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಚಟುವಟಿಕೆಗಳಿಗೆ ಸಹಕಾರ ಕೋರಿದರು.

ಸಚಿವರು ಸರಕಾರದಿಂದ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು. ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಅಪ್ಪಚ್ಚು ರಂಜನ್ ಉಪಸ್ಥಿತರಿದ್ದರು.

error: Content is protected !!