ಪತ್ರಕರ್ತರ ಮಾಸಾಶನದ ಹೆಚ್ಚಳ ಮಾಡಲಾಗುವುದು: ಬಸವರಾಜ ಬೊಮ್ಮಾಯಿ ಭರವಸೆ

ಬೆಂಗಳೂರು: ಪತ್ರಕರ್ತರ ಮಾಸಾಶನ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಬ್ಯುಸಿನೆಸ್ ಐಕಾನ್ ಅವಾರ್ಡ್ -2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ನಿವೃತ್ತಿ ವೇತನ ನೀಡುವ ಕುರಿತಾಗಿ ಶೀಘ್ರದಲ್ಲಿ ಸಮಿತಿ ರಚಿಸಲಾಗುವುದು ಎಂದರು.

ಪ್ರಸ್ತುತ ಇರುವ ಷರತ್ತು ಸಡಿಲಗೊಳಿಸಿ ಮಾಸಾಶನ ಮೊತ್ತ ಹೆಚ್ಚಳ ಮಾಡಲಾಗುವುದು. ಪತ್ರಕರ್ತರ ಕುಟುಂಬ ಆರ್ಥಿಕ ಸಂಕಷ್ಟದಲ್ಲಿ ನಡೆಯುತ್ತಿರುತ್ತವೆ. ಪತ್ರಕರ್ತರಿಗೆ ನಿವೃತ್ತಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

error: Content is protected !!