ಪರಂಬಾಡಿಯಲ್ಲಿ ಕಾರು ಅಪಘಾತ

ವಿರಾಜಪೇಟೆಯ ಪರುಂಬಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಕಾರು ಕೇರಳದ ಕಡೆ ತೆರಳುತ್ತಿತ್ತು ಎನ್ನಲಾಗಿದ್ದು, ಹೆದ್ದಾರಿ ಸಂಚಾರಿ ಪೊಲೀಸರಿಗೆ ಕರೆ ಮಾಡಿದ ಬಳಿಕ ಗಾಯಾಳುಗಳನ್ನು ವಿರಾಜಪೇಟೆ ಆಸ್ಪತ್ರೆಗೆ ಕಳುಹಿಸಲಾಗಿದ್ದು, ವಿರಾಜಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.