fbpx

ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ


ಕೊಡಗು:-ಅಕ್ಟೋಬರ್, 13 ಮತ್ತು 14 ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪಿಜಿಸಿಇಟಿ ಮತ್ತು ಡಿಸಿಇಟಿ 2020ರ ಪರೀಕ್ಷೆ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.ಪರೀಕ್ಷಾ ಆವರಣದೊಳಗೆ ಕಡ್ಡಾಯವಾಗಿ ಸಾಮಾಜಿಕ ಅಂತ ಕಾಯ್ದುಕೊಳ್ಳುವುದು. ಮಾಸ್ಕ್, ಮುಖಗವಸು ಧರಿಸುವುದು, ಕೋವಿಡ್ ಸಂಬಂಧಿತ ಎಸ್‍ಒಪಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು. ಪರೀಕ್ಞಾ ಕೇಂದ್ರದ ಆವರಣದೊಳಗೆ ಸಂಬಂಧಪಡದ ಯಾವುದೇ ವ್ಯಕ್ತಿಗಳ ಪ್ರವೇಶ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಚಟುವಟಿಕೆ. ಅವ್ಯವಹಾರಗಳಿಗೆ ಆಸ್ಪದವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!