ಪರೀಕ್ಷೆಗಳ ಮುಂದೂಡಿಕೆ

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಜೆಇಇ ಮುಖ್ಯ ಪರೀಕ್ಷೆ ಹಾಗೂ ನೀಟ್ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೋಖ್ರಿಯಾಲ್ ಅವರು ಮಾಹಿತಿ ನೀಡಿದ್ದು, ಜೆಇಇ ಮುಖ್ಯ ಪರೀಕ್ಷೆ ಸೆಪ್ಟೆಂಬರ್ 1 ರಿಂದ 6 ರವರೆಗೆ ನಡೆಯಲಿದೆ, ಜೆಇಇ ಮುಖ್ಯ ಪರೀಕ್ಷೆ ಸೆಪ್ಟೆಂಬರ್ 27 ರಂದು ನಡೆಯಲಿದೆ ಮತ್ತು ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ಹೇಳಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜೆಇಇ ಮುಖ್ಯ ಪರೀಕ್ಷೆ ಹಾಗೂ ನೀಟ್ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.