ಪೆಟ್ರೋಲ್ ದರ ಇಳಿಕೆ ಬಗ್ಗೆ ಸುಳಿವು ನೀಡಿದ ಸಚಿವೆ ನಿರ್ಮಲಾ!

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಕಡಿತದ ಬಗ್ಗೆ ಒಗ್ಗೂಡಿ ನಿರ್ಧಾರ ಕೈಗೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಚರ್ಚೆ ನಡೆಸುತ್ತಿದೆ ಎಂದು ತಿಳಿಸಿದ್ದು, ಬೆಲೆ ಏರಿಕೆಯಿಂದಾಗಿ ಗ್ರಾಹಕರ ಮೇಲಿನ ಹೊರೆ ಅರ್ಥವಾಗುತ್ತದೆ. ಆದರೆ ನಾವು ಧರ್ಮ ಸಂಕಟದ ಸ್ಥಿತಿಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ವಿಧಿಸುತ್ತಿಲ್ಲ. ರಾಜ್ಯ ಸರ್ಕಾರಗಳಿಂದಲೂ ತೆರಿಗೆ ಹಾಕಲಾಗುತ್ತಿದೆ. ಕೇಂದ್ರ ಸಂಗ್ರಹಿಸಿದ ತೆರಿಗೆಯಲ್ಲಿ ಶೇಕಡ 41 ರಷ್ಟು ರಾಜ್ಯಗಳಿಗೆ ನೀಡುತ್ತಿದ್ದು, ತೆರಿಗೆ ಇಳಿಕೆ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ತೀರ್ಮಾನ ತೆಗೆದುಕೊಳ್ಳಬೇಕು.

ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್ಟಿ ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್ಟಿ ಮಂಡಳಿ ತೀರ್ಮಾನ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

error: Content is protected !!