ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸದಸ್ಯತ್ವ ಆಂದೋಲನ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಭ್ಯುದಯಕ್ಕಾಗಿ ದುಡಿಯುತ್ತಿರುವ ಸಂಸ್ಥೆ. ಅದರ ಸದಸ್ಯರಾಗುವುದು ಹೆಮ್ಮೆ. ನಾವೆಲ್ಲರೂ ಸದಸ್ಯತ್ವ ಹೊಂದುವ ಮೂಲಕ ಕನ್ನಡ ನಾಡು ಕಟ್ಟುವ ಪರಿಷತ್ತಿಗೆ ಸಹಕರಿಸಬೇಕು ಎಂದು ಗೋಣಿಕೊಪ್ಪಲು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಚೈತ್ರಾ ಚೇತನ್ ರವರು ನುಡಿದರು.
ಅವರು ಗೋಣಿಕೊಪ್ಪಲಿನ ಕಾಮತ್ ನವಮಿ ಸಭಾಂಗಣದಲ್ಲಿ ನಡೆದ ಕಸಾಪದ
ಆನ್ಲೈನ್ ಮೂಲಕ ಸದಸ್ಯತ್ವ ನೋಂದಣಿ ಮಾಡುವ ಅಭಿಯಾನಕ್ಕೆ ಚಾಲನೆ ನೀಡಿ ಸದಸ್ಯತ್ವ ಪಡೆದುಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೊನ್ನಂಪೇಟೆ ಕಸಾಪ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ ಹೋಬಳಿ ಮಟ್ಟದಿಂದ ಸಮಿತಿಗಳನ್ನು ರಚಿಸಲಾಗುತಿದೆ. ಸದಸ್ಯತ್ವ ಅಭಿಯಾನ ನಡೆಸಿ ಪರಿಷತ್ತನ್ನು ಸದೃಢವಾದ ಸಂಸ್ಥೆಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.
ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಎಂ.ವಿ.ಗೋವಿಂದರಾಜ್ ಮಾತನಾಡಿ ಕನ್ನಡ ನಮ್ಮೆಲ್ಲರ ಹೆಮ್ಮೆ. ಕನ್ನಡಿರಾಗಿದ್ದು ಕನ್ನಡ ಉಳಿಸಲು ಎಲ್ಲರೂ ಪಣತೊಡಬೇಕಿದೆ ಎಂದರು.
ಪೊನ್ನಂಪೇಟೆ ಹೋಬಳಿ ಕಸಾಪ ಮಾಜಿ ಅಧ್ಯಕ್ಷ ಬಿ.ಎನ್.ಪ್ರಕಾಶ್ ಮಾತನಾಡಿ ಕನ್ನಡ ಬೆಳೆಸುವ ನಿಟ್ಟಿನಲ್ಲಿ ತಮ್ಮ ಎಲ್ಲಾ ಸಹಕಾರ ಇದೆ ಎಂದರು.
ಪ್ರಗತಿ ಆಟೊ ಚಾಲಕರ ಸಂಘದ ಅಧ್ಯಕ್ಷ ಎಂ.ಎನ್.ಪ್ರಕಾಶ್ ವಾಣಿಜ್ಯೋದ್ಯಮಿಗಳ ಅಂಗಡಿಯ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಗೆ ಆದ್ಯತೆ ಕೊಡಬೇಕು. ನಂತರ ಉಳಿದ ಭಾಷೆಗಳನ್ನು ಉಪಯೋಗಿಸಬೇಕು ಎಂದರು.
ಗೋಣಿಕೊಪ್ಪಲು ವಾಹನ ಚಾಲಕರ ಸಂಘದ ಉಪಾಧ್ಯಕ್ಷ ಶರತ್ ಕಾಂತ್, ಗೋಣಿಕೊಪ್ಪಲು ಆಟೋ ಚಾಲಕರ ಸಂಘದ ಅಧ್ಯಕ್ಷ ಜಿಮ್ಮಾ ಸುಬ್ಬಯ್ಯ, ಮಾತನಾಡಿದರು. ಪೊನ್ನಂಪೇಟೆ ಕಸಾಪ ಗೌರವ ಕಾರ್ಯದರ್ಶಿ ಶೀಲಾ ಬೋಪಣ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.