fbpx

ಪೊಲೀಸ್ ಇಲಾಖೆ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

ರಾಜ್ಯದ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ 250 ಅನುಯಾಯಿ(ಪುರುಷ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದ ಆಗಸ್ಟ್ 30,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 35 ವರ್ಷ ವಯೋಮಿತಿ ಸಡಿಲಿಕೆ ಇದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,600 ರೂ.ನಿಂದ 32,600 ರೂ.ವರೆಗೆ ವೇತನವನ್ನು ನೀಡಲಾಗುವುದು. ಅನುಯಾಯಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೃತ್ತಿಪರ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು 250 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕವಿದ್ದು ನಗದು ಅಥವಾ ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌.ಡಿ.ಎಫ್‌.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್‌ನ ಅಭ್ಯರ್ಥಿ ಪ್ರತಿ ಇಟ್ಟುಕೊಂಡಿರಬೇಕು.

ಅರ್ಜಿ ಶುಲ್ಕವನ್ನು ಸೆಪ್ಟೆಂಬರ್ 1, 2021ರೊಳಗೆ ಪಾವತಿಸಬೇಕು. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. http://rec21.ksp-online.in ವೆಬ್ ಸೈಟ್ ಗಮನಿಸಬಹುದಾಗಿದೆ.

ಅರ್ಜಿಯನ್ನು ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಹೇಳಲಾಗಿದೆ.

error: Content is protected !!