ಪೊಲೀಸ್ ಪೇದೆಗಳ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ:-ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್/ ಮಹಿಳಾ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 25 ರ ವರೆಗೆ ಅವಕಾಶವಿದೆ.

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳು ಜೂನ್ 25 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ಪೊಲೀಸ್ ಅಧಿಕೃತ ವೆಬ್‍ಸೈಟ್ https://recruitment.ksp.gov.in ಅಥವಾ www.ksp.gov.in ಗಮನಿಸಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರು ತಿಳಿಸಿದ್ದಾರೆ.

error: Content is protected !!