fbpx

ಪೊಲೀಸ್ ಠಾಣೆಯಲ್ಲಿ ಖಾಸಗಿ ಸಂಭ್ರಮಾಚರಣೆಗಳಿಗೆ ಸಂಪೂರ್ಣ ನಿಷೇಧ: ಪ್ರವೀಣ್ ಸೂದ್ ಆದೇಶ

ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್‌ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು.

ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್‌ ಖಡಕ್ ಆದೇಶ ಹೊರಡಿಸಿದ್ದಾರೆ.
ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ ಸೂದ್‌ ಆದೇಶಿಸಿದ್ದಾರೆ.

ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸ್ವಾಗತ, ಬೀಳ್ಕೊಡುಗೆ ವಿಚಾರವಾಗಿ ಪ್ರತಿಕ್ರಿಯಸಿದ ಅವರು, ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ನಿರ್ಬಂಧ ಹೇರಿ ಆದೇಶ ನೀಡಿದ್ದಾರೆ.

error: Content is protected !!