ಪೌರಕಾರ್ಮಿಕರ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

ಮಡಿಕೇರಿ ಸೆ.17: -ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಬರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಅರ್ಹ ಮಕ್ಕಳಿಗೆ 6 ನೇ ತರಗತಿ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ.

ಅರ್ಹ ಪೌರಕಾರ್ಮಿಕರ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531 ಮತ್ತು ಜಿಲ್ಲಾ ಸಮನ್ವಯಾಧಿಕಾರಿಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಗರಗಂದೂರು-9611307646 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!