ಪ್ರತಿಷ್ಠಿತ ಶ್ರೇಷ್ಠ ಇಂಜಿನಿಯರ್ ಪ್ರಶಸ್ತಿಗೆ ಭಾಜನರಾದ ಸುರಯ್ಯ ಅಬ್ರಾರ್

ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್ ರಾಜ್ಯಮಟ್ಟದ ಪ್ರತಿಷ್ಠಿತ ಶ್ರೇಷ್ಠ ಇಂಜಿನಿಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದಿ ಇನ್ನೂಟ್ ಆಫ್ ಇಂಜಿನಿಯರ್ಸ್ ಸಂಸ್ಥೆ ರಾಜ್ಯ ಘಟಕದಿಂದ ಬೆಂಗಳೂರಿನಲ್ಲಿ ಗುರುವಾರ ಆಯೋಜಿಸಿದ್ದ ೫೫ನೇ ಇಂಜಿನಿಯರ್ ದಿನಾಚರಣೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ದಿ ಇನ್ನೂಟ್ ಆಫ್ ది ಇಂಜಿನಿಯರ್ಸ್ ಸಂಸ್ಥೆ ರಾಜ್ಯ ಘಟಕ ಅಧ್ಯಕ್ಷ ಎಂ. ಲಕ್ಷ್ಮಣ್ ಮತ್ತಿತರರು ಇದ್ದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷೆಯಾಗಿರುವ ಸುರಯ್ಯ ಅಬ್ರಾರ್ ಮಡಿಕೇರಿಯಲ್ಲಿ ರುವ ಅಬ್ರಾರ್ ಇಂಜಿನಿಯರಿಂಗ್ ಕಾರ್ಪೋರೇಷನ್ ಕಾರ್ಯನಿರ್ವಾಹಕ ಪಾಲುದಾರರಾಗಿದ್ದಾರೆ. ಇಂಜಿನಿಯರ್ ಪದವೀಧರರಾಗಿದ್ದು, ಹಲವು ಕಟ್ಟಡ ನಿರ್ಮಾಣದ ಉಸ್ತುವಾರಿ ನಿರ್ವಹಿಸುತ್ತಿದ್ದಾರೆ.