fbpx

ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ ಉನ್ನತ್ತೀಕರಿಸಿದ ಪದವಿ ಪೂರ್ವ ವಿಜ್ಞಾನ ಕಾಲೇಜು ಬಸವನಹಳ್ಳಿ, ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಕಾಲೇಜು ಗರಗಂದೂರು, ಏಕಲವ್ಯ ಪದವಿ ಪೂರ್ವ ವಿಜ್ಞಾನ ಕಾಲೇಜು ಬಾಳುಗೋಡು, ಅಟಲ್ ಬಿಹಾರಿ ವಸತಿ ವಿಜ್ಞಾನ ಕಾಲೇಜು ಭಾಗಮಂಡಲ, ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕೆ ಎಸ್‍ಎಸ್‍ಎಲ್‍ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2021-22 ಸಾಲಿನಲ್ಲಿ ಪ್ರತೀ ವಸತಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯ ಪಿಸಿಎಂಬಿ ಮತ್ತು ಪಿಸಿಎಂಸಿ ಸಂಯೋಜನೆಗಳಿಗೆ ಒಟ್ಟು 80 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ, ಸ್ಟೇಷನರಿ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳೊಂದಿಗೆ ಉಚಿತ ಸಿ.ಇ.ಟಿ ಮತ್ತು ನೀಟ್ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವುದರ ಜೊತೆಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.
ಆಸಕ್ತರು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ವಸತಿ ಶಾಲೆಗಳಲ್ಲಿ, ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿಸಿದ ವಸತಿ ಶಾಲೆ/ಕಾಲೇಜುಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಆಗಸ್ಟ್, 23 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಕಾಲೇಜು ಗರಗಂದೂರು ದೂ.ಸಂ.9611307646, ಮೊರಾರ್ಜಿ ದೇಸಾಯಿ ಉನ್ನತೀಕರಿಸಿದ ಪದವಿಪೂರ್ವ ವಿಜ್ಞಾನ ಕಾಲೇಜು ಬಸವನಹಳ್ಳಿ ದೂ.ಸಂ.9945707234, ಏಕಲವ್ಯ ಪದವಿ ಪೂರ್ವ ವಿಜ್ಞಾನ ಕಾಲೇಜು ಬಾಳುಗೋಡು 9902499269, ಅಟಲ್ ಬಿಹಾರಿ ವಸತಿ ವಿಜ್ಞಾನ ಕಾಲೇಜು ಭಾಗಮಂಡಲ 9148594914 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸಮನ್ವಯಾಧಿಕಾರಿ ಲೋಕೇಶ್ ಅವರು ತಿಳಿಸಿದ್ದಾರೆ.

error: Content is protected !!