ಪ್ರಭಾಕರ್ ಭಟ್ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ

ಮಂಗಳೂರು: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಮ್ಮ ವಿದ್ಯಾಸಂಸ್ಥೆಯಲ್ಲಿದ್ದ ಕಲ್ಲಡ್ಕ ಪ್ರಭಾಕರ್ ಅವರಿಗೆ ನಿನ್ನೆ ಸಂಜೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಕಲ್ಲಡ್ಕ ಪ್ರಭಾಕರ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಪ್ರಭಾಕರ್ ಭಟ್ ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.