ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಇಬ್ಬರ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಮೊಹ್ಮದ್ ಶಫೀಕ್ (ಬೆಳ್ಳಾರೆ), ಜಾಕೀರ್(ಸವಣೂರು) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇಬ್ಬರೂ ಕೂಡ ಎಸ್.ಡಿ.ಪಿ.ಐ ಅಲ್ಲಿ ಗುರುತಿಸಿಕೊಂಡಿದ್ದಾರೆ.