ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಇತ್ತೀಚೆಗೆ ಹತ್ಯೆಗೀಡಾದ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರುರವರ ಬೆಳ್ಳಾರೆ ಮನೆಗೆ ಭೇಟಿ ನೀಡಿದರು.
ಭೇಟಿ ನೀಡಿದ ವೇಳೆ ಮೃತ ಪ್ರವೀಣ್ ಪೋಷಕರು, ಪತ್ನಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಕುಟುಂಬಕ್ಕೆ ಎಲ್ಲಾ ಬೆಂಬಲ ನೀಡಲು ತಾನೂ ಸಹಕಾರ ಮಾಡುವುದಾಗಿ ಭರವಸೆ ನೀಡಿದರು.