fbpx

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :ಕೊಡಗು ಜಿಲ್ಲೆಗೂ ಪೋಲಿಸ್ ವಿಶೇಷ ತಂಡ ರವಾನೆ

ಕರಾವಳಿಯಲ್ಲಿ ತಲ್ಲಣ ಮೂಡಿಸಿರುವ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡ ರಚಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್, ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಈ ಹಿನ್ನಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ಐದು ವಿಶೇಷ ಪೋಲೀಸ್ ತಂಡವನ್ನು ರಚಿಸಲಾಗಿದೆ. ಕೊಡಗು, ಕೇರಳ ಸೇರಿದಂತೆ ವಿವಿಧ ಕಡೆ ತಂಡ ರವಾನೆ ಆಗಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೆತ್ತಿಕೊಳ್ಳಲಾಗಿದೆ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಿಚಾರಣೆ ಕೂಡಾ ಮಾಡಲಾಗುತ್ತಿದೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಹೇಳಿದ್ದಾರೆ.

error: Content is protected !!