fbpx

ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಪ್ರತಿಭಟನೆ

ಸುಳ್ಯದಲ್ಲಿ ನೆಡೆದ ಪ್ರವೀಣ್ ನೆಟ್ಟಾರ್ ಅವರ ಹತ್ಯೆಯನ್ನು ಖಂಡಿಸಿ ಕುಶಾಲನಗರದಲ್ಲಿ ಹಿಂದು ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.ಇಲ್ಲಿನ ಗಣಪತಿ ದೇವಾಲಯದ ಎದುರಿಗಿರುವ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾವಣೆ ಗೊಂಡ ಕಾರ್ಯಕರ್ತರು ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿದರು.

ಇನ್ನು ಮಂದೆ ಈ ರೀತಿಯ ಘಟನೆಗಳು ಸಂಭವಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ವೇಳೆ ಕೆಲಕಾಲ ಮಡಿಕೇರಿ ಮೈಸೂರು ರಸ್ತೆ ತಡೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮೊದಲು ಪ್ರವೀಣ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು.

error: Content is protected !!