ಪ್ಲಾಸ್ಟಿಕ್ ಬಳಕೆ ನಿಷೇಧ

ಪ್ಲಾಸ್ಟಿಕ್ ಕ್ಯಾರಿಬ್ಯಾಗ್‍ಗಳು ಹಾಗೂ ದೈನಂದಿನ ಬಳಕೆಯಲ್ಲಿರುವ ಇತರೆ ಪ್ಲಾಸ್ಟಿಕ್ ವಸ್ತುಗಳು ಅಲ್ಪಾವಧಿ ಹಾಗೂ ದೀರ್ಘವಾಧಿಯಲ್ಲಿ ಪರಿಸರಕ್ಕೆ ಹಾನಿ ಮತ್ತು ಆರೋಗ್ಯಕ್ಕೆ ಅಪಾಯ ಉಂಟುಮಾಡಲು ಕಾರಣವಾಗುತ್ತಿರುವುದರಿ0ದ ಕರ್ನಾಟಕ ಸರ್ಕಾರದ ಆದೇಶದಂತೆ ಯಾವುದೇ ತರಹದ ಮರು ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ.

ಆದ್ದರಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಯಾವುದೇ ರೀತಿಯ ಪ್ಲಾಸ್ಟಿಕ್ ಚೀಲವನ್ನು ಬಳಸದಂತೆ ಕ್ರಮವಹಿಸುವುದು ಹಾಗೂ ಅಂಗಡಿ ಮುಂಗಟ್ಟುಗಳ ಮುಂದೆ ಮತ್ತು ಸಾರ್ವಜನಿಕ ಸ್ಥಳದಲ್ಲಿ “ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ” ಎಂಬ ಫಲಕವನ್ನು ಅಳವಡಿಸುವುದು. ಪ್ಲಾಸ್ಟಿಕ್ ಬಳಕೆ ಕಂಡುಬಂದಲ್ಲಿ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರ ಮೇಲೆ ಕಾನೂನು ರೀತ್ಯಾ ದಂಡ ವಿಧಿಸಲಾಗುವುದು. ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

error: Content is protected !!