ಫೆ.23 ರಿಂದ ರಸ್ತೆ ಸಂಚಾರ ಸಮೀಕ್ಷೆ

ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ 2022 ನೇ ಸಾಲಿನಲ್ಲಿ 2 ದಿನಗಳ ರಸ್ತೆ ಸಂಚಾರ ಸಮೀಕ್ಷೆಯು ಫೆಬ್ರವರಿ, 23 ರ ಬೆಳಗ್ಗೆ 6 ಗಂಟೆಯಿಂದ ಫೆಬ್ರವರಿ, 25 ರ ಬೆಳಗ್ಗೆ 6 ಗಂಟೆಯವರೆಗೆ ನಡೆಯಲಿದೆ.

ರಸ್ತೆ ಸಂಚಾರ ಸಮೀಕ್ಷೆಯಲ್ಲಿ ರಸ್ತೆ ಸಂಚಾರದ ಬಗ್ಗೆ ವಿವರಗಳನ್ನು ಸಂಗ್ರಹಿಸಲು ಜಿಲ್ಲೆಯಲ್ಲಿ ಒಟ್ಟು 97 ಗಣತಿ ಕೇಂದ್ರಗಳನ್ನು ರಾಜ್ಯ ಹೆಚ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಸ್ಥಾಪಿಸಲಾಗುವುದು.
ರಸ್ತೆ ಸಂಚಾರದ ಮಾಹಿತಿಯನ್ನು ವಿಶ್ಲೇಷಿಸಿ, ರಾಜ್ಯ ಮಟ್ಟದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಲು ಅಂದರೆ ರಸ್ತೆಗಳ ಪಥಗಳನ್ನು ಅಗಲಪಡಿಸುವುದು, ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಮತ್ತಿತರ ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕೆ ಉಪಯುಕ್ತವಾಗುತ್ತದೆ ಎಂದು ಹಾಸನ ವೃತ್ತದ ಲೋಕೋಪಯೋಗಿ ಇಲಾಕೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಅವರು ತಿಳಿಸಿದ್ದಾರೆ

error: Content is protected !!