ಫೆ.24 ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಂಸದರಾದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ, 24 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿ.ಪಂ.ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.