fbpx

ಬಡವರಿಗೆ ಸೂರು ಕಲ್ಪಿಸಲಾಗುವುದು: ಸಚಿವ ವಿ.ಸೋಮಣ್ಣ

ಬೆಂಗಳೂರು: ನಗರ ಪ್ರದೇಶದ ಎಲ್ಲಾ ಬಡವರಿಗೆ ಸೂರು ಕಲ್ಪಿಸುವುದಾಗಿ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಗರದ ಪ್ರದೇಶದಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಡಲು ಕ್ರಮಕೈಗೊಳ್ಳಲಾಗಿದೆ. ಮುಂದಿನ ಎರಡು ವರ್ಷದಲ್ಲಿ ವಸತಿ ಯೋಜನೆಗಳ ಜಾರಿ ಒಂದು ಹಂತಕ್ಕೆ ಬರಲಿದೆ.

ಬಡವರಿಗೆ ವಸತಿ ಕಲ್ಪಿಸಲು ಮುಂದಾಗಿ 1.80 ಲಕ್ಷ ಮಂದಿಯಲ್ಲಿ 33 ಸಾವಿರ ಜನರಿಗೆ ಸಾಲ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ. ವಸತಿ ಯೋಜನೆಗಳ ಮೂಲಕ ಮನೆ ನಿರ್ಮಿಸಿ ಹಂಚಿಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

error: Content is protected !!