ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಮನವಿ ಪತ್ರ

ಸಾರಿಗೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ
ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಹಾರಂಗಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ಸ್ಥಳೀಯ ವಾರ್ಡ್ ಸದಸ್ಯರಾದ ಮಣಿಕಂಠರವರು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದಾರೆ.

ಅತ್ತೂತು, ಹಾರಂಗಿ, ಚಿಕ್ಕತ್ತೂರು, ಸುಂದರನಗರದ ಗ್ರಾಮಗಳಲ್ಲಿ ಸುಮಾರು ೫ ಸಾವಿರಕ್ಕೂ ಹೆಚ್ಚು ಜನರು ವಾಸವಿದ್ದಾರೆ. ಕಾರ್ಮಿಕರು, ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಸೂಕ್ತ ವಾಹನ ವ್ಯವಸ್ಥೆಯಿಲ್ಲದೇ ಸಂಚರಿಸಲು ತೊಡಕುಂಟಾಗುತ್ತಿದೆ. ಸಾರಿಗೆ ವ್ಯವಸ್ಥೆಯಿಲ್ಲದೇ ಜನರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.
ಬೆಳಿಗ್ಗೆ ೮:೩೦ಕ್ಕೆ ಕುಶಾಲನಗರ, ಸುಂದರನಗರ, ಚಿಕ್ಕತ್ತೂರು, ಹಾರಂಗಿ ಮತ್ತು ಅತ್ತೂರಿಗೆ ಮಾರ್ಗವಾಗಿ ಮತ್ತು ಅತ್ತೂರು, ಹಾರಂಗಿ, ಚಿಕ್ಕೂರು, ಸುಂದರನಗರ ಮಾರ್ಗವಾಗಿ ಮಧ್ಯಾಹ್ನ ೨:೩೦ಕ್ಕೆ ಹಾಗೂ ಸಂಜೆ ೫:೩೦ಕ್ಕೆ ರಾಜ್ಯ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟು ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಸದಸ್ಯರಾದ ಮಣಿಕಂಠರವರು, ಗ್ರಾಮಸ್ಥರಿಗೆ ಸರ್ಕಾರಿ ಬಸ್ ನ ಸೌಲಭ್ಯವಿಲ್ಲದೇ ತೊಂದರೆಯಾಗುತ್ತಿದೆ. ಈ ಹಿನ್ನೆಲೆ ಸಂಬಂಧಪಟ್ಟ ಸಾರಿಗೆ ಇಲಾಖೆಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಶಾಸಕರು ಗಮನಕ್ಕೂ ತರಲಾಗಿದ್ದು, ಶಾಸಕರಾದ ಅಪ್ಪಚ್ಚುರಂಜನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

error: Content is protected !!