ಬಿಎಸ್‍ಸಿ ನರ್ಸಿಂಗ್ ಪದವಿಗೆ ಅರ್ಜಿ ಆಹ್ವಾನ

ಮಡಿಕೇರಿ ಸೆ.19:-ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 2022 ನೇ ಸಾಲಿಗೆ ಮೊದಲನೇ ವರ್ಷದ ಬಿಎಸ್‍ಸಿ ನಸಿರ್ಂಗ್, ಬಿಎಸ್‍ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಕೋರ್ಸುಗಳ ಪ್ರವೇಶಾತಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಪ್ರಚಾರ ಪಡಿಸಿರುವ ಮಾಹಿತಿ ಪುಸ್ತಕದಲ್ಲಿ ನೀಡಿರುವ ಶೈಕ್ಷಣಿಕ ಅರ್ಹತೆ ಮತ್ತು ಇತರೆ ಮಾನದಂಡ ಖಚಿತ ಪಡಿಸಿಕೊಂಡು ನಂತರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ನಲ್ಲಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಂಡು ಸೆಪ್ಟೆಂಬರ್, 20 ರ ರಾತ್ರಿ 11.59 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಸೆಪ್ಟೆಂಬರ್, 21 ರ ಸಂಜೆ 4 ಗಂಟೆಯೊಳಗೆ ಶುಲ್ಕವನ್ನು ಪಾವತಿಸಬಹುದು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ಅನ್ನು ನೋಡಬಹುದು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕಾರ್ಯಪ್ಪ ಅವರು ತಿಳಿಸಿದ್ದಾರೆ.

error: Content is protected !!