ಬಿಎಸ್ ವೈ ಪುತ್ರ ವಿಜಯೇಂದ್ರ ವಿರುದ್ದ ಎಫ್ ಐ ಆರ್ ದಾಖಲು ಮಾಡುವಂತೆ ಕಾಂಗ್ರೆಸ್ ಒತ್ತಾಯ


ಮೈಸೂರು: ಕೋವಿಡ್ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ,ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮೇ 18ರಂದು
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಕುಟುಂಬ ಸಮೇತ ಪೂಜೆ ಹಾಗು ಹೋಮ ಸಲ್ಲಿಸಿದ್ದು ಇದನ್ನು ಜಿಲ್ಲಾ ಕಾಂಗ್ರೆಸ್ ವಿರೋಧಿಸಿ, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯಾದ ರೋಹಿಣಿ ಸಿಂಧೂರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.