fbpx

ಬಿಜೆಪಿ ಕಾರ್ಯಕರ್ತನ ಕೊಲೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಪುತ್ತೂರಿನ ಬೆಳ್ಳಾರೆ ತಾಲ್ಲೂಕಿನಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಜುಲೈ ಇಂದು ಗುರುವಾರದಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ಯಲ್ಲಿ ದುರ್ಗಾವಾಹಿನಿ ಕಾರ್ಯಕರ್ತರೂ ಭಾಗಿಯಾಗಿದ್ದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಭರಿತ ಘೋಷಣೆ ಕೂಗಿದ ಪ್ರತಿಭಟನಾಕಾರರು. ಪೊಲೀಸರು ಅಂತಿಮ ದರ್ಶನದ ವೇಳೆ ಲಾಠಿಚಾರ್ಜ್ ಅನ್ನು ಮಾಡಿದ್ದನ್ನು ತೀವ್ರವಾಗಿ ಖಂಡಿಸಿದರು.

ರಾಜ್ಯ ಸರ್ಕಾರದ ಗೃಹಸಚಿವರು ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪ್ರವೀಣ್ ನೆಟ್ಟಾರು ಹತ್ಯೆಯನ್ನು ಪಿ.ಎಫ್.ಐ ಸಂಘಟನೆಯವರು ಮಾಡಿರುವುದಾಗಿ ಆರೋಪಿಸಿದ ಬಜರಂಗದಳದ ಮುಖಂಡ ವಿನಯ್ ಅವರು ಭಾ.ಜ.ಪ ಅಧಿಕಾರದಲ್ಲಿಯೇ ಹೀಗೆ ಹಿಂದುಗಳ ಕಗ್ಗೋಲೆ ಖಂಡನೀಯ ಎಂದರು. ಅಲ್ಲದೇ ರಾಜ್ಯ ಸರ್ಕಾರದವರು ಹಿಂದುಗಳ ರಕ್ಷಣೆಯಲ್ಲಿ ಸಂಪೂರ್ಣ ವಿಫಲ ಎಂದು ತಮ್ಮ ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ವಿ.ಹೆಚ್.ಪಿ, ಬಜರಂಗದಳ ಹಾಗೂ ದುರ್ಗಾವಾಹಿನಿ ಪ್ರಮುಖರು ಹಾಗೂ ಭಾಜಪ ಮುಖಂಡರು ಪಾಲ್ಗೊಂಡಿದ್ದರು.

error: Content is protected !!