ಬಿಜೆಪಿ ಜನಜಾಗೃತಿ ಸಮಾವೇಶ ಮುಂದೂಡಿಕೆ

ಆಗಸ್ಟ್ 26 ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪಕ್ಷದ ಜನಜಾಗೃತಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಅಧ್ಯಕ್ಷ ರಾಬಿನ್ ದೇವಯ್ಯ ಮಾಹಿತಿ ನೀಡಿದ್ದಾರೆ.
ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ರಾಬಿನ್ ದೇವಯ್ಯ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಅಂತಿಮ ಕ್ಷಣದಲ್ಲಿ ಜಿಲ್ಲಾಧಿಕಾರಿಯವರಿಗೂ ಮನವಿ ಮಾಡಲಾಗಿತ್ತು. ಮುಂಜಾಗೃತ ಕ್ರಮವಾಗಿ ಪಕ್ಷದ ಹಿರಿಯ ನಾಯಕರು ಕಾನೂನಿಗೆ ಬೆಲೆ ಕೊಟ್ಟು ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.