ಬೆಂಕಿ ಆಕಸ್ಮಿಕಕ್ಕೆ ಅಂಗಡಿಗಳು ಭಸ್ಮ!

ಆಕಸ್ಮಿಕ ಬೆಂಕಿ ತಗುಲಿ ಅಂಗಡಿ ಮಳಿಗೆಗಳು ಸುಟ್ಟು ಕರಕಲಾಗಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ತರಕಾರಿ, ಕೋಳಿ ಮಾಂಸ ಮತ್ತು ಸಲೂನ್ ಸುಟ್ಟು ಕರಕಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂಬಿರುವ ಕಾರ್ಯದಲ್ಲಿ ತೊಡಗಿದ್ದು,ಬಳಿಕ ಮಡಿಕೇರಿಯಿಂದ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಕಸ್ಮಿಕ ಬೆಂಕಿ ಕಾಣಿಸಿಕೂಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ, ಅಂದಾಜು 2 ಲಕ್ಷ ದಷ್ಟು ನಷ್ಟ ಸಂಭವಿಸಿರಬಹುದು ಎನ್ನಲಾಗಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!