ಬೆಸ್ಕಾಂನಲ್ಲಿ ಕಂಪೆನಿ ಸೆಕ್ರೆಟರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ನಲ್ಲಿ ಕಂಪನಿ ಸಕ್ರೆಟರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 5ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಬೆಸ್ಕಾಂ ನೇಮಕಾತಿ ನಿಯಮಗಳ ಅನ್ವಯ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 61,420 – 103290ರೂ. ವರೆಗೂ ವೇತನ ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕಾದ ವಿಳಾಸ:
General Manager (A&HR),
BESCOM Corporate Office,KR Circle,
Bangaluru-560001