ಬೈಕ್ ಅಪಘಾತ, ಸವಾರ ಸಾವು

ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮಹಿಳೆ ಮತ್ತು ಮಗು ಗಾಯಗೊಂಡ ಘಟನೆ ಶನಿವಾರಸಂತೆಯ ಮಾಲಂಬಿಯ ಬಸವನಳ್ಳಿಯಲ್ಲಿ ನಡೆದಿದೆ.
ಕುಶಾಲನಗರ ಹೊರವಲಯದ ಕೂಡುಮಂಗಳೂರಿನಿಂದ ಹಾಸನ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ಶೇಖರ್ ಕುಟುಂಬ ಕೊಡ್ಲಿಪೇಟೆಯ ಮಾರ್ಗದಲ್ಲಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು ಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದು ಶೇಖರ್ ಪತ್ನಿ ಮತ್ತು ಮಗು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.