fbpx

ಬ್ರಾಹ್ಮಣರಿಗೆ‌ ಜಾತಿ ಪ್ರಮಾಣ ಪತ್ರ ನೀಡಲು ರಾಜ್ಯ ಸರಕಾರ ಆದೇಶ

ಬೆಂಗಳೂರು : ಬ್ರಾಹ್ಮಣ ಸಮುದಾಯದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಾತಿ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಗೋಳ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಹಲವು ಸೌಲಭ್ಯ ಪಡೆಯಲು ಪಡೆಯಲು ಅನುಕೂಲವಾಗಲು ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡಲು ಸರ್ಕಾರ ಆದೇಶಿಸಿದೆ ಎಂದರು.

ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ರಾಜ್ಯ ಸರ್ಕಾರ ಕೇಂದ್ರದ ಆದೇಶದ ಅನುಷ್ಠಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಆದೇಶ ಹೊರಡಿಸಿದೆ. ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ .10 ರಷ್ಟು ಮೀಸಲಾತಿ ನೀಡಿ ಆದೇಶ ಹೊರಡಿಸಿತ್ತು . ಈ ಹಿನ್ನೆಲೆ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿ ಹಿತದೃಷ್ಠಿಯಿಂದಲೇ ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡುವ ಆದೇಶ ಹೊರಡಿಸಿದ್ದೇವೆ ಎಂದರು .

error: Content is protected !!