ಭಜರಂಗದಳದ ಕಾರ್ಯಕರ್ತನ ಹತ್ಯೆ!

ಮುಸ್ಲಿಂ ಗೂಡಾಗಳೇ ಈ ಕೊಲೆಯನ್ನು ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ ಆಕ್ರೋಶ

ಬೆಂಗಳೂರು: ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಮುಸ್ಲಿಂ ಗೂಂಡಾಗಳಿಂದಲೇ ಹತ್ಯೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಈಶ್ವರಪ್ಪ, ಹತ್ಯೆಯಾದ ಹರ್ಷ ಭಜರಂಗದಳದ ನಿಷ್ಠಾವಂತ ಕಾರ್ಯಕರ್ತ. ಮುಸ್ಲಿಂ ಗೂಂಡಾಗಳೇ ಆತನನ್ನು ಹತ್ಯೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಇದುವರೆಗೂ ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಇಂತಹ ಗೂಂಡಾಗಳನ್ನು ನಾವು ಎಂದೂ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಯಿಂದ ಪ್ರೇರಿತರಾಗಿ ಮುಸ್ಲಿಂ ಗೂಂಡಾಗಳು ಈ ಕೃತ್ಯವೆಸಗಿದ್ದಾರೆ. ಶಿವಮೊಗ್ಗದ ಕಾಲೇಜೊಂದರಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿ ಬಾವುಟ ಹಾರಿಸಿದ್ದಾರೆ. ಸೂರತ್ ನಿಂದ 50 ಲಕ್ಷ ಕೇಸರಿ ಶಾಲು ತರಿಸಿ ಹಂಚಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದರಿಂದಲೇ ಗೂಂಡಾಗಳಿಗೆ ಪ್ರಚೋದನೆ ಸಿಕ್ಕಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ದುಷ್ಕರ್ಮಿಗಳನ್ನು ಶೀಘ್ರದಲ್ಲಿ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!