ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ಬಂಧನ

ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ರಾತ್ರಿ 9:30ರ ಸುಮಾರಿಗೆ ಶಿವಮೊಗ್ಗದ ತೀರ್ಥಹಳ್ಳಿ ಬಳಿ ನಡುರಸ್ತೆಯಲ್ಲಿ ಕಾರಿನಲ್ಲಿ ಬಂದ 4-6 ಜನರ ದುಷ್ಕರ್ಮಿಗಳ ಗುಂಪು ಭಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು.

ಘಟನೆ ಬೆನ್ನಲ್ಲೇ ಶಿವಮೊಗ್ಗದಾದ್ಯಂತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದೀಗ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಕಾರಿನಲ್ಲಿ ಬಂದು ಹತ್ಯೆ ಮಾಡಿ ಬಳಿಕ ಆಟೋದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಕೊಲೆ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ. ಹತ್ಯೆ ಮಾಡಿದವರು ಯಾರೆಂಬುದು ಗೊತ್ತಾಗಿದೆ. ಹಾಗಾಗಿ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ತಿಳಿಸಿದ್ದರು.

error: Content is protected !!