ಭಾರತಕ್ಕೆ ಧನ್ಯವಾದ ತಿಳಿಸಿದ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇಬಾ

ಯುದ್ಧ ಪೀಡಿದ ರಾಷ್ಟ್ರ ಉಕ್ರೇನ್ ನಲ್ಲಿ ಸಿಲುಕಿರುವ ನೇಪಾಳಿ ಪ್ರಜೆಗಳನ್ನು ರಕ್ಷಣೆ ಮಾಡಿರುವ ಸಲುವಾಗಿ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇಬಾ ಭಾರತಕ್ಕೆ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಧನ್ಯವಾದ ಹೇಳಿದ ಅವರು, ಉಕ್ರೇನ್ ನಲ್ಲಿ ಸಿಲುಕಿದ್ದ ನಾಲ್ಕು ನೇಪಾಳಿಯರು ಭಾರತದ ಮೂಲಕ ಸುರಕ್ಷಿತವಾಗಿ ನೇಪಾಳ ಸೇರಿದ್ದಾರೆ.
ಆಪರೇಷನ್ ಗಂಗಾ ಮೂಲಕ ನೇಪಾಳಿಯರನ್ನು ವಾಪಾಸ್ ಕರೆದುತಂದ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗಾಗಿ ಭಾರತ ಸರ್ಕಾರ ಕೈಗೊಂಡಿರುವ ಆಪರೇಷನ್ ಗಂಗಾ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಈವರೆಗೆ 18 ಸಾವಿರಕ್ಕೂ ಹೆಚ್ಚು ಭಾರತೀಯರು ತಾಯ್ನಾಡಿಗೆ ವಾಪಾಸ್ ಆಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.