ಮಂಗಳವಾರ ಪ್ರಧಾನಿ ಮೋದಿ ವಿಡಿಯೋ ಸಂವಾದದಲ್ಲಿ ಕೊಡಗು ಜಿಲ್ಲಾಧಿಕಾರಿ ಕೂಡ ಭಾಗಿ

ಕೊಡಗು: ಪ್ರಧಾನಿ ಮೋದಿ ಮೇ 18ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧಿತ ಕೈಗೊಂಡ ಪರಿಹಾರ ಕ್ರಮಗಳ ಬಗ್ಗೆ ಮತ್ತು ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಚರ್ಚಿಸಲಿದ್ದು, ಪ್ರಧಾನಿ ಚರ್ಚಿಸಲಿರುವ ಜಿಲ್ಲಾಧಿಕಾರಿಗಳ ಪೈಕಿ ಕೊಡಗು ಜಿಲ್ಲಾಧಿಕಾರಿಗಳು ಚಾರುಲತಾ ಸೋಮಲ್ ಕೂಡ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ವಿಡಿಯೋ ಸಂವಾದದಲ್ಲಿ ಭಾಗವಹಿಸಲಿದ್ದಾರೆ.