ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಕಾನೂನು ಅರಿವು ಕಾರ್ಯಾಗಾರ ಆಯೋಜನೆ

ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್‌ ಇಲಾಖೆಯ ಸಹಯೋಗದಲ್ಲಿ ನಿನ್ನೆ “ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಕಾನೂನು ಅರಿವು ಕಾರ್ಯಾಗಾರ” ವನ್ನು ಇಂದು ಜಿಲ್ಲಾ ಪೊಲೀಸ್‌ ಕಛೇರಿ ಕಿರು ಸಭಾಂಗಣ, ಡಿ.ಎ.ಆರ್. ಮೈದಾನದ ಬಳಿ ಮಡಿಕೇರಿ ಇಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮವನ್ನು ಶ್ರೀ ಎಂ ಭೃಂಗೇಶ್, ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಕೊಡಗು ಜಿಲ್ಲೆ, ಮಡಿಕೇರಿ ಇವರು ಉದ್ಘಾಟಿಸಿದರು ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಪ್ರಸಾದ್ ಕೆ.ಬಿ. ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ಜಿಲ್ಲೆ ಇವರು ಹಾಜರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಪ್ಟನ್ ಎಂ.ಎ. ಅಯ್ಯಪ್ಪ ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು, ಕೊಡಗು ಜಿಲ್ಲೆ ಇವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀಮತಿ ಉಷಾ ಅಯ್ಯಣ್ಣ ಸದಸ್ಯರು, ಮಕ್ಕಳ ಕಲ್ಯಾಣ ಸಮಿತಿ, ಕೊಡಗು ಜಿಲ್ಲೆ, ಶ್ರೀ ಗಜೇಂದ್ರ ಪ್ರಸಾದ್ ಜಿ.ಎಸ್., ಪೊಲೀಸ್ ಉಪ ಅಧೀಕ್ಷಕರು, ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ, ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಕೊಡಗು ಜಿಲ್ಲೆ, ಶ್ರೀ. ಮಂಜುನಾಥ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ, ಶ್ರೀ ಪೂಣಚ್ಚ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ಜಿಲ್ಲೆ ಹಾಗೂ ಶ್ರೀ. ಅನಿಲ್ ಬಗಟಿ, ಕಾರ್ಮಿಕ ಅಧಿಕಾರಿ, ಕೊಡಗು ಜಿಲ್ಲೆ ಇವರು ಹಾಜರಿದ್ದರು. ಶ್ರೀಮತಿ ರೋವಿನ ಬ್ಯಾಸ್ಟಿನ್ ಹಾಗೂ ಕುಮಾರಿ ಶ್ರೀಯಾ ಹೆಗಡೆ, ವಿಹಾನ್ ಸಂಸ್ಥೆ, ಬೆಂಗಳೂರು ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕದ ಸಿಬ್ಬಂದಿಗಳು, ಸಖಿ ಒನ್ ಸ್ಟಾಪ್ ಆಡಳಿತಾಧಿಕಾರಿ, ಬಾಲನ್ಯಾಯ ಮಂಡಳಿಯ ಸಿಬ್ಬಂದಿಗಳು ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳು ಹಾಜರಿದ್ದರು.

error: Content is protected !!