ಮಕ್ಕಳ ಸಹಾಯವಾಣಿ ಆರಂಭ

ಕೋವಿಡ್-19 ರ ಎರಡನೇ ಅಲೆಯ ಸೋಂಕಿನಿಂದಾಗಿ ಕೆಲವು ಕುಟುಂಬಗಳಲ್ಲಿ ಎಲ್ಲಾ ಸದಸ್ಯರು ಸೋಂಕಿಗೆ ತುತ್ತಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಕುಟುಂಬಗಳ ಮಕ್ಕಳು ಕುಟುಂಬದಿಂದ ದೂರವಿರಬೇಕಾದ ಹಾಗೂ ಮಾನಸಿಕ ಖಿನ್ನತೆಗೆ ಒಳಗಾಗುವ ಸಂದರ್ಭ ಎದುರಾಗುವ ಸಾಧ್ಯತೆಯಿದೆ ಹಾಗೂ ಕೋವಿಡ್ ರೋಗದಿಂದ ತಂದೆ ಹಾಗೂ ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳು ಕೊಡಗು ಜಿಲ್ಲೆಯಲ್ಲಿ ಕಂಡುಬಂದಲ್ಲಿ, ಮಕ್ಕಳ ಉಚಿತ ಸಹಾಯವಾಣಿ-1098 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.