fbpx

ಮಡಿಕೇರಿಯಲ್ಲಿ ಕಾಫಿ ಬೆಳೆಗಾರರಿಂದ ಚೆಸ್ಕಾಂ ಕಚೇರಿಗೆ ಮುತ್ತಿಗೆ

ಕಾಫಿ ಬೆಳೆಗಾರರ ಬಹುದಿನದ ಬೇಡಿಕೆಯ 10 ಹೆಚ್.ಪಿವರೆಗೆ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡದಿರುವ ಹಿನ್ನಲೆ ಬೆಳೆಗಾರರು ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ರಾಜ್ಯದ ಇತರೆ ಜಿಲ್ಲೆಗಳ ರೈತರಿಗೆ ರಾಜ್ಯ ಸರ್ಕಾರ ಉಚಿತ ವಿದ್ಯುತ್ ನೀಡುತ್ತಿದ್ದು, ಕೊಡಗಿನ ರೈತರನ್ನು ಮಾತ್ರ ಕಡೆಗಣಿಸಲಾಗಿದೆ ಎಂದು ಆರೋಪಿಸಿದ ಬೆಳೆಗಾರರು,ಮುಖ್ಯಮಂತ್ರಿಗಳು ಭರವಸೆ ನೀಡಿದರೂ ಚೆಸ್ಕಾಂ ವಿದ್ಯುತ್ ನೀಡುತ್ತಿಲ್ಲ ಎಂದು ಎಂಜಿನಿಯರ್ ಗಳನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದ್ದು, ತಕ್ಷಣ ಕ್ರಮ ಕೈಗೊಂಡಿಲ್ಲ ಎಂದಾದಲ್ಲಿ ಉಗ್ರ ಸ್ವರೂಪದ ಹೋರಾಟ ದ ಎಚ್ಚರಿಕೆಯನ್ನು ನೀಡಿದ್ದಾರೆ.

error: Content is protected !!