ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮೂಟ್ಟೆ ಎಸೆತ: ಸಿದ್ದರಾಮಯ್ಯ ಗೋ ಬ್ಯಾಕ್ ಪ್ರತಿಭಟನೆಯಲ್ಲಿ ಘಟನೆ


ಪೊಟೋ ಕೃಪೆ: ಚಾನಲ್ ಕೂಗ್೯
ಮಡಿಕೇರಿಯಲ್ಲಿ ನಡೆದ “ಗೋ ಬ್ಯಾಕ್ ಸಿದ್ದರಾಮಯ್ಯ” ಕಪ್ಪು ಬಾವುಟ ಪ್ರದರ್ಶನ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ, ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದಿದ್ದು ಮಡಿಕೇರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಹರಸಾಹಸ ಪಡಬೇಕಾಯಿತು.

ಮಳೆ ಹಾನಿ ವೀಕ್ಷಣೆಯ ಹಿನ್ನಲೆಯಲ್ಲಿ ಕೊಡಗಿಗೆ ಭೇಟಿ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಪ್ರವೇಶ ಮಾಡುತ್ತಿದ್ದ ವೇಳೆ ತಿತಿಮತಿಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ ನಂತರ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಮಡಿಕೇರಿ ಪ್ರವೇಶಿಸುತ್ತಿದ್ದಂತೆ ಈ ಘಟನೆ ಸಂಭವಿಸಿದೆ.