fbpx

ಮಡಿಕೇರಿ – ಮಂಗಳೂರು ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ

ಜಿಲ್ಲಾಡಳಿತ ಭವನದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ 7+1 ಸೀಟರ್ ವರೆಗಿನ ವಾಹನಗಳು ದ್ವಿಮುಖವಾಗಿ ಸಂಚರಿಸಬಹುದೆಂದು ಜಿಲ್ಲಾಡಳಿತ ಆದೇಶ ನೀಡಿದೆ.

7+1 ಸೀಟರ್ ಗಿಂತ ಹೆಚ್ಚಿನ ಸಾಮರ್ಥ್ಯದ 4 ಚಕ್ರ ವಾಹನಗಳು ಮಂಗಳೂರು ಕಡೆಗೆ ಏಕಮುಖವಾಗಿ ಸಂಚರಿಸಬಹುದಾಗಿದ್ದು,7+1 ಸೀಟರ್ ಗಿಂತ ಹೆಚ್ಚಿನ ಸಾಮರ್ಥ್ಯದ 4 ಚಕ್ರ ವಾಹನಗಳು ಮಂಗಳೂರಿನಿಂದ ಮಡಿಕೇರಿ ಕಡೆಗೆ ಸಂಪಾಜೆ – ತಾಳತ್ತಮನೆ- ಮೇಕೇರಿ ಮಾರ್ಗವಾಗಿ ಏಕಮುಖವಾಗಿ ಸಂಚರಿಸಲಿವೆ.16.2 ಟನ್ ಒಳಪಟ್ಟ ಸರಕು ಸಾಗಣೆ ವಾಹನಗಳು, ಖಾಸಗಿ‌ ಮತ್ತು ಕೆ.ಎಸ್ಆರ್‌ಟಿಸಿ ಬಸ್‌ಗಳು, ಅನಿಲ, ರಸಗೊಬ್ಬರ ಹಾಗೂ ಇಂಧನ ಸಾಗಣೆ ವಾಹನಗಳು ಎರಡೂ ರಸ್ತೆಗಳಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

error: Content is protected !!