ಮಡಿಕೇರಿ ವ್ಯಾಪ್ತಿಯಲ್ಲಿ ಎರಡು ಅಪಘಾತ!

ಮಡಿಕೇರಿ ಮಂಗಳೂರು ರಸ್ತೆಯಲ್ಲಿ ಇಂದು ಎರಡು ಪ್ರತ್ಯೇಕ ಅಪಘಾತ ನಡೆದಿದೆ. ಮದೆನಾಡು ಸಮೀಪ ಕ್ವಿಡ್ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಮತ್ತೊಂದು ಅಪಘಾತ ದೇವರಕೊಲ್ಲಿ ಸೇತುವೆ ತಿರುವಿನಲ್ಲಿ ನ್ಯಾನೋ ಕಾರು ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.