ಮನರೇಗಾ ಕಾಮಗಾರಿ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಸಿ.ಕೆ.ಮಲ್ಲಪ್ಪ
ಮಡಿಕೇರಿ ಸೆ.23:-ಕೊಡಗು ಜಿಲ್ಲೆಯಲ್ಲಿ ಮನರೇಗಾ ಕಾಮಗಾರಿಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಮುಖ್ಯ ಅಭಿಯಂತರರಾದ ಸಿ.ಕೆ.ಮಲ್ಲಪ್ಪ ಅವರು ಸಲಹೆ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡು ಅವರು ಮಾತನಾಡಿದರು.
ಗುರುವಾರದಂದು ಕೊಡಗು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಅವರು ನರೇಗಾ ಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ನಂತರ ವಿರಾಜಪೇಟೆ, ಸೋಮವರಪೇಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮನರೇಗಾ ಯೋಜನೆಯಡಿ ನಿರ್ಮಾಣಗೊಂಡಿರುವ ಅಮೃತ್ ಸರೋವರ ಕೆರೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಹಲವಾರು ತಾಂತ್ರಿಕ ವಿಷಯಗಳ ಕುರಿತು ಸಲಹೆ ಹಾಗೂ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಧನರಾಜು, ಪಿಆರ್ಇಡಿ ಕಾರ್ಯಪಾಲಕ ಅಭಿಯಂತರರಾದ ನಾಗೇಂದ್ರಪ್ಪ,ಎ.ಇ.ಇ ಜವರೇಗೌಡ, ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಶೇಖರ್, ಅಪ್ಪಣ್ಣ, ಜಯಣ್ಣ, ಮನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಹೇಮಂತ್, ರವೀಶ್, ಶ್ರೀನಿವಾಸ್, ಮನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿಗಳು ಇತರರು ಹಾಜರಿದ್ದರು.