ಮನೆಗೆ ನುಗ್ಗಿ ದರೋಡೆ. ಮಹಿಳೆ ಕೊಲೆ ಯತ್ನ!

ಸುಂಟಿಕೊಪ್ಪ: ಮನೆಗೆ ನುಗ್ಗಿ ಮಹಿಳೆಯ ಕತ್ತು ಹಿಚುಕಿ ಹತ್ಯೆಗೆ ಯತ್ನಿಸಿ, ಮನೆ ದರೋಡೆ ಮಾಡಿ ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ
ಸುಂಟಿಕೊಪ್ಪ ಸಮೀಪದ ಹಾರ್ತಿಬೈಲ್ ಬಳಿ ನಡೆದಿದೆ.

ಘಟನೆಯಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಮುಸುಕುದಾರಿಗಳಿಂದ ಕೃತ್ಯ ಹಿನ್ನಲೆಯಲ್ಲಿ ಆರೋಪಿಗಳ ಪತ್ತೆ ಕಾರ್ಯಕ್ಕೆ
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು,
ಶ್ವಾನದಳ, ಬೆರಳಚ್ಚು ತಜ್ಞರ ತಂಡದಿಂದ ತನಿಖೆ ನಡೆಯುತ್ತಿದೆ. ಆರೋಪಿಗಳ ಪತ್ತೆಗೆ ಶಿಪ್ರ ಪೊಲೀಸರ ಕಾರ್ಯಾಚರಣೆ ನಡೆಸಲಾಗುತ್ತಿದೆ.

error: Content is protected !!