ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಮಡಿಕೇರಿ :-ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಫಲಾನುಭವಿಗಳಿಗೆ 2021-22 ನೇ ಸಾಲಿಗೆ ‘ವಾಜಪೇಯಿ ನಗರ ಯೋಜನೆ’ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ ವರ್ಗದವರಿಗೆ ಹಾಗೂ ‘ಡಾ.ಅಂಬೇಡ್ಕರ್ ನಗರ ವಸತಿ ಯೋಜನೆ’ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮನೆಯನ್ನು ನಿರ್ಮಿಸಲು ಅರ್ಜಿ ಸಲ್ಲಿಸಬಹುದಾಗಿದೆ.

ಆದ್ದರಿಂದ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರು, ಖಾಲಿ ನಿವೇಶನ ಹಾಗೂ ಮನೆ ಹೊಂದಿರುವ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಇನ್ನಿತರೆ ಅಗತ್ಯ ದಾಖಲೆ ಪತ್ರ ಇರುವ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಅರ್ಹ ಫಲಾನುಭವಿಗಳು ಏಪ್ರಿಲ್, 08 ರೊಳಗೆ ನಗರಸಭೆಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ವಿವರಗಳಿಗೆ ಕಚೇರಿ ಕೆಲಸದ ವೇಳೆಯಲ್ಲಿ ವಸತಿ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರಾದ ರಾಮದಾಸ್ ಅವರು ತಿಳಿಸಿದ್ದಾರೆ.

error: Content is protected !!