ಮನೆ ಮನೆಗೆ ತೆರಳಿ ಕೋವಿಡ್ ಪರೀಕ್ಷೆ ಮಾಡಿ: ಡಿಸಿ

ಕೊಡಗು: ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಸೇರಿದಂತೆ ಕೆಲವು ಕಡೆಗಳಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇಂತಹ ಪ್ರದೇಶದ ಗ್ರಾಮಗಳ ಮನೆ ಮನೆಗೆ ತೆರಳಿ RAT ಪರೀಕ್ಷೆ ಮಾಡಿ ಸೋಂಕಿತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವಂತೆ ತಹಶೀಲ್ದಾರರು ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿರ್ದೇಶನ ನೀಡಿದ್ದಾರೆ.

ತಹಶೀಲ್ದಾರರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ಜೊತೆ ವಿಡಿಯೊ ಸಂವಾದಲ್ಲಿ ಅವರು ಮಾತನಾಡಿದರು.
ಸೋಂಕಿತರನ್ನು ಅನವಶ್ಯಕವಾಗಿ ಗೃಹ ಸಂಪರ್ಕ ತಡೆಯಲ್ಲಿರಿಸದೆ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು. ಇದರಿಂದ ಸೋಂಕಿತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಬಹುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸಂಚಾರಿ ಆರೋಗ್ಯ ತಂಡ ಸರಿಯಾಗಿ ಕೆಲಸ ಮಾಡಿದರೆ ಗ್ರಾಮ ಮಟ್ಟದಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಬಹುದಾಗಿದೆ. ರ್ಯಾಟ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಲ್ಲಿ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಕೋವಿಡ್-19 ಪ್ರಕರಣ ಸಂಬಂಧಿಸಿದಂತೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ಕೆಲವು ಗ್ರಾಮಗಳನ್ನು ಹಾಟ್‍ಸ್ಪಾಟ್ ಪ್ರದೇಶವೆಂದು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಾಗಿ ಮಾಡಬೇಕು ಎಂದು ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದರು.

error: Content is protected !!