fbpx

ಮನೆ ಸಕ್ರಮಕ್ಕೆ ಅವಧಿ ವಿಸ್ತರಣೆ

ಸೋಮವಾರಪೇಟೆ: ಅಕ್ರಮ ಮನೆ ನಿರ್ಮಾಣದ ಸಕ್ರಮಕ್ಕೆ ಕಾಲಾವಧಿ ವಿಸ್ತರಣೆ ಮಾಡಲಾಗಿದ್ದು, ಜನತೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ಪಟ್ಟಣ ಹಾಗು ಗ್ರಾಮೀಣ ಭಾಗಗಳ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ವಾಸದ ಮನೆ ನಿರ್ಮಿಸಿಕೊಂಡಿರುವವರು ಸಕ್ರಮಗೊಳಿಸಿಕೊಳ್ಳಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 94ಸಿ ಹಾಗೂ 94 ಸಿಸಿಯಡಿ ಅರ್ಜಿ ಸಲ್ಲಿಸಲು 31/3/2022ರವರೆಗೆ ಅವಧಿ ವಿಸ್ತರಿಸಲಾಗಿದೆ. ಆದ್ದರಿಂದ ಜನತೆ ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ರಂಜನ್ ತಿಳಿಸಿದ್ದಾರೆ‌.

error: Content is protected !!